ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಭರತ್ ಕುಮ್ಡೇಲ್‌ನನ್ನು 24 ಗಂಟೆಯ ಒಳಗಡೆ ಬಂಧಿಸದಿದ್ದರೆ ‘ಎಸ್ಪಿ ಕಚೇರಿ ಚಲೋ’ ನಡೇಸುವುದಾಗಿ ಎಸ್.ಡಿ.ಪಿ.ಐ. ಎಚ್ಚರಿಕೆ ನೀಡಿದೆ.

ಪಿಕ್‌ಅಪ್ ವಾಹನದ ಚಾಲಕ ಅಬ್ದುಲ್ ರಹೀಂ ಹತ್ಯೆ ಸೂತ್ರಧಾರ ಭರತ್ ಕುಮ್ಡೇಲ್‌ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24 ಗಂಟೆಯ ಒಳಗಡೆ ಬಂಧಿಸಬೇಕು. ಇಲ್ಲದಿದ್ದರೆ ಎಸ್ಪಿ ಕಚೇರಿ ಚಲೋ ಸಹಿತ ದ.ಕ. ಜಿಲ್ಲಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದೆಂದು ಎಸ್‌ಡಿಪಿಐ ದ.ಕ. ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೂನಿಷ್ ಅಲಿ ಎಚ್ಚರಿಕೆ ನೀಡಿದ್ದಾರೆ.

ಗ್ಯಾಂಗ್‌ವಾರ್‌ನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಜಿಲ್ಲೆಯ ಹಲವು ಭಾಗಗಳಲ್ಲಿ ಮುಸ್ಲಿಂ ಯುವಕರ ಹತ್ಯಾಯತ್ನ ನಡೆದಿತ್ತು. ಅಲ್ಲದೆ ಸಂಘಪರಿವಾರದ ನಾಯಕರಾದ ಭರತ್ ಕುಮ್ಡೇಲ್, ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಸಹಿತ ಹಲವು ಸಂಘ ಪರಿವಾರದ ನಾಯಕರು ಹತ್ಯೆಗೆ ಪ್ರತೀಕಾರ ನಡೆಸುತ್ತೇವೆ ಎಂದು ಬಹಿರಂಗವಾಗಿ ಭಾಷಣಗೈದು ಮುಸ್ಲಿಂ ಯುವಕರ ಹತ್ಯೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರು. ಆದರೂ ಕೂಡ ಪೋಲಿಸ್ ಇಲಾಖೆ ಹಾಗೂ ಸರಕಾರ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿಲ್ಲ. ಅದರ ಪರಿಣಾಮ ಕೊಳ್ತಮಜಲುವಿನಲ್ಲಿ ಅಬ್ದುಲ್ ರಹೀಂ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭರತ್ ಕುಮ್ಡೇಲ್‌ನ ಕೈವಾಡ ಇರುವುದು ಪೊಲೀಸ್ ಇಲಾಖೆಗೆ ತಿಳಿದಿದ್ದರೂ ಕೂಡ ಈತನಕ ಈತನ ಮೇಲೆ ಕ್ರಮವಾಗಿಲ್ಲ. ಗುರುವಾರ ಸಂಜೆಯೊಳಗೆ ಈತನ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಎಸ್ಪಿಕಚೇರಿ ಚಲೋ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳ ಸ್ಥಳಾಂತರಕ್ಕೆ ಮುಸ್ಲಿಂ ನಾಯಕರು ಇಟ್ಟಿರುವ ಬೇಡಿಕೆಯನ್ನು ಮುಖ್ಯಮಂತ್ರಿ ಒಪ್ಪಿದ್ದಾರೆ ಮತ್ತು ಶೀಘ್ರವೇ ಹೊಸ ಅಧಿಕಾರಿಗಳ ನೇಮಕ ಆಗಲಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಈ ಬಗ್ಗೆ ಪೋಸ್ಟರುಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!