ಪಿಕ್‌ಅಪ್ ವಾಹನದ ಚಾಲಕ ಅಬ್ದುಲ್ ರಹೀಂ ಹತ್ಯೆ ಸೂತ್ರಧಾರ ಭರತ್ ಕುಮ್ಡೇಲ್‌ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24 ಗಂಟೆಯ ಒಳಗಡೆ ಬಂಧಿಸಬೇಕು. ಇಲ್ಲದಿದ್ದರೆ ಎಸ್ಪಿ ಕಚೇರಿ ಚಲೋ ಸಹಿತ ದ.ಕ. ಜಿಲ್ಲಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದೆಂದು ಎಸ್‌ಡಿಪಿಐ ದ.ಕ. ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೂನಿಷ್ ಅಲಿ ಎಚ್ಚರಿಕೆ ನೀಡಿದ್ದಾರೆ.
ಗ್ಯಾಂಗ್‌ವಾರ್‌ನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಜಿಲ್ಲೆಯ ಹಲವು ಭಾಗಗಳಲ್ಲಿ ಮುಸ್ಲಿಂ ಯುವಕರ ಹತ್ಯಾಯತ್ನ ನಡೆದಿತ್ತು. ಅಲ್ಲದೆ ಸಂಘಪರಿವಾರದ ನಾಯಕರಾದ ಭರತ್ ಕುಮ್ಡೇಲ್, ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಸಹಿತ ಹಲವು ಸಂಘ ಪರಿವಾರದ ನಾಯಕರು ಹತ್ಯೆಗೆ ಪ್ರತೀಕಾರ ನಡೆಸುತ್ತೇವೆ ಎಂದು ಬಹಿರಂಗವಾಗಿ ಭಾಷಣಗೈದು ಮುಸ್ಲಿಂ ಯುವಕರ ಹತ್ಯೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರು. ಆದರೂ ಕೂಡ ಪೋಲಿಸ್ ಇಲಾಖೆ ಹಾಗೂ ಸರಕಾರ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿಲ್ಲ. ಅದರ ಪರಿಣಾಮ ಕೊಳ್ತಮಜಲುವಿನಲ್ಲಿ ಅಬ್ದುಲ್ ರಹೀಂ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭರತ್ ಕುಮ್ಡೇಲ್‌ನ ಕೈವಾಡ ಇರುವುದು ಪೊಲೀಸ್ ಇಲಾಖೆಗೆ ತಿಳಿದಿದ್ದರೂ ಕೂಡ ಈತನಕ ಈತನ ಮೇಲೆ ಕ್ರಮವಾಗಿಲ್ಲ. ಗುರುವಾರ ಸಂಜೆಯೊಳಗೆ ಈತನ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಎಸ್ಪಿಕಚೇರಿ ಚಲೋ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳ ಸ್ಥಳಾಂತರಕ್ಕೆ ಮುಸ್ಲಿಂ ನಾಯಕರು ಇಟ್ಟಿರುವ ಬೇಡಿಕೆಯನ್ನು ಮುಖ್ಯಮಂತ್ರಿ ಒಪ್ಪಿದ್ದಾರೆ ಮತ್ತು ಶೀಘ್ರವೇ ಹೊಸ ಅಧಿಕಾರಿಗಳ ನೇಮಕ ಆಗಲಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಈ ಬಗ್ಗೆ ಪೋಸ್ಟರುಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…