ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿನಿಮಾದ ನಿರ್ಮಾಪಕ ಕೆ. ಸತ್ಯೇಂದ್ರ ಪೈ ಅವರು, ಈ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ, ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವ ಕಥಾವಸ್ತುವನ್ನು ಹೊಂದಿದೆ.

ಗಂಭೀರ ಕತೆಯನ್ನು ಹಾಸ್ಯದ ಲೇಪನದೊಂದಿಗೆ ಪ್ರೇಕ್ಷಕರಿಗೆ ಉಣಬಡಿಸುವ ಪ್ರಯತ್ನವನ್ನು ನಿರ್ದೇಶಕರು ಮಾಡಿದ್ದಾರೆ. ಇದು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ, ಚಿತ್ರೀಕರಿಸಲಾಗಿದೆ. ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಟ ಕೆ. ನಾಗೇಶ್ ಕಾಮತ್, ಚಿತ್ರ ಸಂಘಟಕ ಗಣೇಶ್ ಕಿಣಿ, ನಟಿ ಅಶ್ವಿನಿ, ಬಾಲನಟರಾದ ಯಶಸ್ ಸುವರ್ಣ, ವೈಷ್ಣವಿ ಉಪಸ್ಥಿತರಿದ್ರು.



