ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವು ಪ್ರಸ್ತುತಪಡಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಸ್ಲೊವೇನಿಯಾದಿಂದ ಗ್ರೀಸ್ ದೇಶಕ್ಕೆ ಆಗಮಿಸಿದ್ದು, ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ಕುರಿತ ದೃಢನಿಶ್ಚಯದ ಮತ್ತು ರಾಜಿರಹಿತ ನೀತಿಯನ್ನು ಒತ್ತಿ ಹೇಳಿದೆ. ರಷ್ಯಾ, ಸ್ಲೊವೇನಿಯಾ ಭೇಟಿ ಬಳಿಕ ಗ್ರೀಸ್ ಗೆ ಬಂದಿಳಿದ ಸರ್ವಪಕ್ಷ ನಿಯೋಗವನ್ನು ಭಾರತದ ರಾಯಭಾರಿ ಅಧಿಕಾರಿ ರುದ್ರೇಂದ್ರ ಟಂಡನ್ ಬರಮಾಡಿಕೊಂಡರು.
ಆ ಬಳಿಕ ನಿಯೋಗವು ಹೆಲೆನಿಕ್ ರಿಪಬ್ಲಿಕ್ ಉನ್ನತ ಮಟ್ಟದ ಚರ್ಚೆಗಳಲ್ಲಿ ಭಾಗವಹಿಸಿದೆ. ನಿಯೋಗವು ಗ್ರೀಸ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳು, ಡೆಪ್ಯೂಟಿ ಮಿನಿಸ್ಟರ್ ಟಾಟೋಸ್ ಚಾಟ್ಜಿವಾಸಿಲಿಯೊ ಅವರೊಂದಿಗೆ ಸಭೆ ನಡೆಸಿ ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯ ಬಗ್ಗೆ ಸಮಗ್ರ ವಿವರಣೆ ನೀಡಿದೆ. ಭಯೋತ್ಪಾದನೆಯ ವಿರುದ್ದ ಭಾರತದ ಸ್ಪಷ್ಟ ನಿಲುವು, ಆಪರೇಷನ್ ಸಿಂದೂರ್ ಹಾಗೂ ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿವರವಾಗಿ ತೆರೆದಿಟ್ಟಿದೆ. ಇದಾದ ನಂತರ ನಿಯೋಗವು ಗ್ರೀಕ್, ಹೆಲೆನಿಕ್ ಫೌಂಡೇಶನ್ ಫಾರ್ ಯುರೋಪಿಯನ್ ಅಂಡ್ ಫಾರಿನ್ ಪಾಲಿಸಿ ನ ಮಹಾನಿರ್ದೇಶಕಿ ಮಾರಿಯಾ ಗವೌನೆಲಿ ಹಾಗೂ ಅವರ ತಂಡ, ಸಂಸತ್ತಿನ ಪ್ರಮುಖ ಸದಸ್ಯರು, ಪ್ರಮುಖ ನೀತಿ ತಜ್ಞರು, ವಿಚಾರವಂತರು-ಚಿAತಕರರು ಹಾಗೂ ಮಾಧ್ಯಮದೊಂದಿಗೆ ಸರಣಿ ಸಭೆಗಳನ್ನು ನಡೆಸಿ ಭಯೋತ್ಪಾದನೆ ವಿರುದ್ಧದ ಭಾರತದ ಸಮರವನ್ನು ಸ್ಪಷ್ಟವಾಗಿ ಮನವರಿಕೆ ಮಾಡಿದೆ. ಆ ಮೂಲಕ, ಭಾರತದ ದೃಢವಾದ ಭಯೋತ್ಪಾದನಾ ವಿರೋಧಿ ಸಿದ್ಧಾಂತವನ್ನು ಪುನರುಚ್ಚರಿಸಿದೆ. ದಾಳಿಗೆ ನೇರ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯು ಸಮರ್ಥನೀಯ ಮತ್ತು ಪೂರ್ವಯೋಜಿತ ಕ್ರಮ. ಇದು ಭಾರತದ ಸಮನ್ವಯ ನ್ಯಾಯದ ತತ್ವಗಳಿಗೆ ಅನುಗುಣವಾಗಿದೆ ಎಂದು ನಿಯೋಗ ಸ್ಪಷ್ಟಪಡಿಸಿದೆ. ಭಾರತದ ಏಕತೆ, ಶಾಂತಿಗೆ ಅಚಲವಾದ ಬದ್ಧತೆಯನ್ನು ಮತ್ತು ಜಾಗತಿಕ ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸುವ ದೃಢ ಸಂಕಲ್ಪಕ್ಕೆ ಹಾಗೂ ಭಯೋತ್ಪಾದನೆ ಎಂಬ ಜಾಗತಿಕ ಪಿಡುಗನ್ನು ಎದುರಿಸಲು ಅಂತಾರಾಷ್ಟ್ರೀಯ ಸಮುದಾಯವು ಒಂದಾಗಬೇಕೆAಬ ಭಾರತದ ನಿಲುವಿಗೆ ಗ್ರೀಸ್ ದೇಶ ಕೂಡ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಉಗ್ರರಿಗೆ ಪೋಷಣೆ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಅಭಿಪ್ರಾಯ ರೂಪಿಸುವ ಕೇಂದ್ರ ಸರ್ಕಾರದ ಪ್ರಯತ್ನದ ಭಾಗವಾಗಿ ಸರ್ವಪಕ್ಷಗಳ ನಿಯೋಗವು ಗ್ರೀಸ್ ಬಳಿಕ ಲಾಟ್ವಿಯಾ ಮತ್ತು ಸ್ಪೇನ್‌ಗೆ ಪ್ರಯಾಣಿಸಲಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…