ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮಗು ಮೃತಪಟ್ಟ ಘಟನೆ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್‌ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಮೊಂಟೆ ಪದವುನಲ್ಲಿ ಗುಡ್ಡ ಜರಿದು ಮೂವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಇದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕುಂಪಲ, ಕಲ್ಲಾಪು, ಧರ್ಮ ನಗರ, ಉಚ್ಚಿಲ, ತಲಪಾಡಿ, ವಿದ್ಯಾನಗರ, ಕಲ್ಕಟ್ಟ ಮುಂತಾದ ಕಡೆಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಮನೆಯೊಳಗೆ ನೀರು ನುಗ್ಗಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆ ಸ್ಥಳಾಂತರಗೊ0ಡಿದೆ. ಕಲ್ಲಾಪುವಿನಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಲಪಾಡಿ ಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ.
ಈ ಕುಟುಂಬವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ, ಗ್ರಾಮಕರಣಿಕ ಸುರೇಶ್ ಮತ್ತಿತರರು ರಾತ್ರಿ ವೇಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…