ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಾಂಡ್ ಮೂಲದ 32ರ ಹರೆಯದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಲಾರಿ ಚಾಲಕ ಸುಜಿತ್ ಕ್ಲೀನರ್ ಸಿ ಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಅಕ್ಕಿ ಲೋಡ್ ಲಾರಿ ಬಂಟ್ವಾಳದ ಎಸ್‌ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ. ಅಕ್ಕಿ ಲೋಡ್‌ನ ಮೇಲೆ ಅಂದರೆ ಲಾರಿಯ ಹಿಂಬಾಗದಲ್ಲಿ ಕುಳಿತುಕೊಂಡಿದ್ದ ಕಾರ್ಮಿಕ ಲಾರಿ ಪಲ್ಟಿಯಾದ ವೇಳೆ ರಸ್ತೆಗೆ ಎಸೆಯಲ್ಟಟ್ಟು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…