ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ; ಸಾವು..!

ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ಮಂಗಳೂರು ನಗರದ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ ಎಂದು ಗುರುತಿಸಲಾಗಿದೆ.

ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು,ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಅವರ ಕಾಲಿಗೆ ಗಂಭೀರ  ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್ ಡಿ ಆರ್‌ಎಫ್ , ಉಳ್ಳಾಲ ತಾಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!