ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ಮಂಗಳೂರು ನಗರದ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ ಎಂದು ಗುರುತಿಸಲಾಗಿದೆ.
ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು,ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್ ಡಿ ಆರ್‌ಎಫ್ , ಉಳ್ಳಾಲ ತಾಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…