ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಯೊಂದರ ಹಿಂಭಾಗಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರರಿಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮೇ.29ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಒಕ್ಕೆತ್ತೂರು ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇರ್ಫಾನ್ ಮೃತ ದುರ್ದೈವಿಯಾಗಿದ್ದಾನೆ.

ಸಹಸವಾರ ಒಕ್ಕೆತ್ತೂರು ನಿವಾಸಿ ಪುತ್ತು ಎಂಬವರ ಪುತ್ರ ಫಾರೀಸ್ ಗಂಭೀರ ಗಾಯಗೊಂಡವರಾಗಿದ್ದಾರೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿಯನ್ನು ನಿಲ್ಲಿಸಿ ಚಾ ಕುಡಿಯಲು ಹೋಗಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.



