ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಮುಂಜಾಗೃತೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ -ಯು.ಟಿ.ಖಾದರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು, ಮದೀನದಿಂದ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್, ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ ಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಳ್ಳಾಲ ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದ್ದು ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು, ಸೋಮೇಶ್ವವರ, ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದ್ದು ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೂ ಕೂಡಾ ತರಲಾಗಿದ್ದು ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಯು.ಟಿ.ಖಾದರ್ ತಿಳಿಸಿದ್ದಾರೆ. ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವ ಯು.ಟಿ.ಖಾದರ್ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡು ರಕ್ಷಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಆದಾಗ್ಯೂ ಸಾರ್ವಜನಿಕರು ಅಗತ್ಯ ಬಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ನನ್ನ ದೂರವಾಣಿ ಸಂಖ್ಯೆಯನ್ನು ಸಂಪರ್ಕ ಮಾಡಬಹುದು. ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ (೧೦),ಮಂಜನಾಡಿ ಗ್ರಾಮದ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಗುಡ್ಡ ಜರಿದು ಐವರು ಮಣ್ಣಿನಡಿಯಲ್ಲಿ ಸಿಲುಕಿ ಪ್ರೇಮ ಪೂಜಾರಿ ರವರು ಮೃತರಾಗಿದ್ದು ಇತರರ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಅಪರ ಜಿಲ್ಲಾಧಿಕಾರಿ ತಹಶೀಲ್ದಾರು ಹಾಗೂ ಇತರ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ,ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊ0ಡು ಸಹಕರಿಸುವಂತೆ ಸಭಾಧ್ಯಕ್ಷರು ಸೂಚನೆ ನೀಡಿದ್ದು ಜನ ಸಾಮಾನ್ಯರೂ ಕೂಡಾ ಎಚ್ಚರಿಕೆ ವಹಿಸುವಂತೆ ಸಭಾಧ್ಯಕ್ಷರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!