ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಟ ಕಮಲ್ ಹಾಸನ್‌ಗೆ ಮತ್ತೊಂದು ಸಂಕಷ್ಟ..!!

ತಮಿಳಿನಿ0ದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಳೆದ 2 ದಿನಗಳಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ. ಉಡುಪಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಸೇರಿದ್ದ ಕರವೇ ಕಾರ್ಯಕರ್ತರು ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿದರು. ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರು ನಟಿಸಿರುವ “ಥಗ್ ಲೈಫ್” ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದು, ಇದು ಅತ್ಯಂತ ಖಂಡನೀಯ. ಈ ಆಧಾರರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದೆ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಮಲ್ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಜೂನ್ 5ರಂದು ಬಿಡುಗಡೆ ಸಿದ್ದವಾಗಿರುವ ಅವರ “ತಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!