ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ದ್ವೇಷದ ಕೊಲೆಗೆ ಸೂಕ್ತ ಕ್ರಮ ಕೈಗೊಂಡು, ಕೊಲೆಯ ಹಿಂದಿರುವ ಶಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ದ್ವೇಷದ ಭಾಷಣ ಹಾಗೂ ಪ್ರಚೋದನೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದಲ್ಲಿ ಇಂತಹ ಪ್ರಕರಣಗಳನ್ನು ಮಟ್ಟ ಹಾಕಲು ಸಾಧ್ಯವಾಗದು. ಈ ಬಗ್ಗೆ ಆಳವಾಗಿ ತನಿಖೆ ನಡೆಸುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಇದರಲ್ಲಿ ಸೇರಿಕೊಂಡಿರುವುದಾಗಿ ಜನಾಭಿಪ್ರಾಯವಿದೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕಿದೆ ಎಂದ್ರು.



