ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಬೊಳಿಯದಲ್ಲಿ ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಸಂಜೀವರವರ ಮನೆ ಕುಸಿದು ಬಿದ್ದಿದ್ದು ಸದ್ಯ ಆ ಸಂಧರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ,ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರಾದ ಸತೀಶ್ ಪೂಜಾರಿ ಬಳ್ಳಾಜೆ, ಪುಷ್ಪ ನಾಯ್ಕ್ , ಅಭಿವೃದ್ಧಿ ಅಧಿಕಾರಿ ಸವಿತಾ ಮಂದೋಲಿಕರ್ , ಕಾರ್ಯದರ್ಶಿ ವಸಂತಿ. ಕಂದಾಯ ಸಿಬ್ಬಂದಿ ರಜನಿ ಭೇಟಿ ನೀಡಿದರು .

ಸದ್ಯ ಮನೆಯವರನ್ನು ಬೇರೆ ಮನೆಗೆ ಸ್ಥಳಾಂತರಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮನೆಯ ಮೇಲ್ಚಾವಣಿಗೆ ಟರ್ಪಾಲ್ ವ್ಯವಸ್ಥೆಯನ್ನು ಪಂಚಾಯತ್ ವತಿಯಿಂದ ಮಾಡಲಾಯಿತು .



