ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರಿಗೆ ಈ ಬೆದರಿಕೆ ಬಂದಿದ್ದು, ಬೆದರಿಕೆ ಆಡಿಯೋದಲ್ಲಿ ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ, ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ, ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ, ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದುಹಾಕಿದ್ದಾರೆ.
ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ, ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ, ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗೆ ಗೊತ್ತಿಲ್ಲ, ನಿನ್ನ ಕೊಂದ ರೀತಿಯನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ.
ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು, ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಮುಗಿಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ. ಈ ಕುರಿತಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇನ್ನು ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೀವ ಬೆದರಿಕೆ ಅಡಿಯೋ ಮೆಸೇಜ್ ಬಂದಿರುವ ಹಿನ್ನಲೆ ಉನ್ನತ ತನಿಖೆಗೆ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…