ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಅಶ್ವಿನಿಯವರ ಇನ್ನೊಂದು ಮಗು ಕೂಡಾ ಮೃತಪಟ್ಟಿದೆ. ಈ ನಡುವೆ ಅಶ್ವಿನಿಯವರನ್ನು ರಕ್ಷಿಸಲಾಗಿದೆ. ಒಂದೂವರೆ ವರ್ಷ ಪ್ರಾಯದ ಮಗು ಆಯುಷ್ ಮೃತಪಟ್ಟಿದೆ.
ಕೆಲಹೊತ್ತಿನ ಮೊದಲು ಮೂರು ವರ್ಷದ ಮಗು ಆರ್ಯನ್ ಕೂಡಾ ಮೃತಪಟ್ಟಿತ್ತು. ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ ಸ್ಥಳದಲ್ಲೇ ಮೃತಪಟ್ಟಿದ್ದರು. ಕಾಂತಪ್ಪರ ಮಗ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ ಅವರ ಇಬ್ಬರು ಸಣ್ಣ ಮಕ್ಕಳು ಕುಸಿದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ಈ ಪೈಕಿ ಒಂದೂವರೆ ವರ್ಷ ಪ್ರಾಯದ ಮಗು ಆಯುಷ್‌ನನ್ನು ಮಧ್ಯಾಹ್ನದ ವೇಳೆ ರಕ್ಷಣಾ ತಂಡ ಅವೇಷಗಳಡಿಯಿಂದ ಹೊರ ತೆಗೆದಿತ್ತು. ಆದರೆ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು. ಬಳಿಕ ತಾಯಿ ಹಾಗೂ ಇನ್ನೊಂದು ಮಗು ಆಯುಷ್ ನನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿತ್ತು. ಅಶ್ವಿನಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ಬೆಳಗ್ಗೆ ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…