ಉಡುಪಿ: ಅಕ್ರಮ ಮರಳು ದಂಧೆ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ಕೆಲವು ಮಂದಿ ಹೊಳೆಯಿಂದ ಮರಳು ತೆಗೆದು ದೋಣಿಗೆ ತುಂಬಿಸುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಂಜಾನಾಯ್ಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ವ್ಯಕ್ತಿ ಸುನಿಲ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿತಗಳು ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸುತ್ತಿರುವುದು ಕಂಡುಬಂದಿದೆ.
ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ-1(ಅಂದಾಜು ಮೌಲ್ಯ-15,000/-), 1 ½ ಯುನಿಟ್ ಮರಳು(ಅಂದಾಜು ಮೌಲ್ಯ-5,000/-), KA20 C6070ನೇ 407 ಟಿಪ್ಪರ್ ವಾಹನ(ಅಂದಾಜು ಮೌಲ್ಯ-5,00,000/-) ಹಾಗೂ ಕಬ್ಬಿಣದ ಹಾರೆ-1, ಫೈಬರ ಬುಟ್ಟಿಗಳು-2 ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…