ಮೂಕ ಪ್ರಾಣಿಗಳ ಮೇಲೆ ಇನ್ನೆಷ್ಟು ದಿನ ಈ ನೀಚರು ಕ್ರೌರ್ಯವನ್ನ ಮರೆಯುತ್ತಾರೋ ಗೊತ್ತಿಲ್ಲ. ಪ್ರತಿ ಬಾರಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನ ಕಟ್ಟಿ ಮಾಂಸಕ್ಕಾಗಿ ಹೊತ್ತೊಯ್ಯುತ್ತಾರೆ.
ಎಷ್ಟೇ ಪೊಲೀಸರು ಎಚ್ಚರಿಕೆಯಿಂದ ಇದ್ರೂ ಸರ್ವರಿಗೂ ಹಾಲನ್ನ ಉಣಿಸುವ ಆ ಮುಗ್ದ ಜೀವಗಳ ಮೇಲಿನ ದೌರ್ಜನ್ಯ ಕಡಿಮೆಯಾಗಿಲ್ಲ. ಇದೀಗ ಇಂತಹದ್ದೇ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹಾದು ಹೋಗುವ ರಸ್ತೆಗಳಲ್ಲಿ ಹೆಚ್ಚು ಚೆಕ್ ಪೋಸ್ಟ್ಗಳನ್ನು ತೆರೆದಿದ್ದಾರೆ.
ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದ್ದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ. ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…