ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರ; ಸಂಸದ ಕ್ಯಾ. ಬ್ರಿಜೇಶ್ ಚೌಟ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಮತ್ತೊಮ್ಮೆ ನಮ್ಮ ಕರಾವಳಿ ಭಾಗದ ಹಿಂದೂ ನಾಯಕರು ಮತ್ತು ಸಂಘಟನೆಗಳನ್ನು ಬೆದರಿಸಲು, ವಿಭಜಿಸಲು ಹಾಗೂ ಕಿರುಕುಳ ನೀಡಲು ಆಡಳಿತ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಕಳವಳ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ ಕೇಸ್ ದಾಖಲಿಸುವುದನ್ನು ಖಂಡಿಸಿರುವ ಕ್ಯಾ.ಚೌಟ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ, ತನ್ನ ಹುಳುಕನ್ನು ಮರೆಮಾಚಲು, ಹತಾಶೆಯಿಂದ ಹಿಂದೂಗಳ ಧ್ವನಿ ಹತ್ತಿಕ್ಕುತ್ತಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ದ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಬಿಜೆಪಿ ಮುಖಂಡ ಹಾಗೂ ಹಿಂದೂ ನಾಯಕ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿಗೆ ಗಡಿಪಾರು ಮಾಡಲು ನಿರ್ಧರಿಸಿದೆ. ಹಿಂದೂ ಸಮುದಾಯದ ಯುವಕರು ಹಾಗೂ ಪ್ರಮುಖ ನಾಯಕರನ್ನು ಸುಳ್ಳು ಕೇಸ್ ದಾಖಲಿಸಿ, ಗಡಿಪಾರು ಮಾಡಲು ಹೊರಟಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರದ ಈ ಸಂವಿಧಾನ ವಿರೋಧಿ, ಅಧಿಕಾರಶಾಹಿ ಹಾಗೂ ಹಿಂದೂ ವಿರೋಧಿ ಕ್ರಮಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!