ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಕಾಲ ಸುರಿದ ಮಳೆಯಿಂದ ಆಸ್ತಿಪಾಸ್ತಿ ನಷ್ಟದ ಜತೆಗೆ ಪ್ರಾಣಹಾನಿಯಾಗಿದೆ. ಈ ನಡುವೆ ಸ್ಥಳೀಯ ಶಾಸಕರು ಪರಿಹಾರ ಕಾರ್ಯ ಸೇರಿದಂತೆ ಅಭಿವೃದ್ಧಿಯಲ್ಲಿ ಸರಕಾರಕ್ಕೆ ಬೆಂಬಲ ನೀಡುವುದು ಬಿಟ್ಟು ಟೀಕೆಯಲ್ಲಿ ನಿರತರಾಗಿದ್ದಾರೆ. 
ಇನ್ನಾದರೂ ಕಪಟ ರಾಜಕಾರಣ ಬದಿಗಿಟ್ಟು ಸರಕಾರದ ಒಳ್ಳೆಯ ಕಾರ್ಯದಲ್ಲಿ ಬೆಂಬಲಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪದ್ಮರಾಜ್, ದ.ಕ. ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು, ಮಳೆ ಹಾನಿ ಸಾಕಷ್ಟು ಸಂಕಷ್ಟಗಳಿಗೆ ಕಾರಣವಾಗಿದೆ. ಮಳೆಹಾನಿಯಾಗಿ ಪ್ರಾಣ ಕಳೆದುಕೊಂಡವರ ಮನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರ ನಿರ್ದೇಶದನ ಮೇರೆಗೆ ಭೇಟಿ ನೀಡಿರುವ ಉಸ್ತುವಾರಿ ಸಚಿವರು ಪರಿಹಾರ ನೀಡುವ ಕಾರ್ಯವನ್ನು ಅಧಿಕಾರಿಗಳ ಮುತುವರ್ಜಿಯಲ್ಲಿ ನೆರವೇರಿಸಿದ್ದಾರೆ ಎಂದಿದ್ದಾರೆ. ಆದರೆ ಶಾಸಕರು ಮಾತ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ ನಿರತರಾಗಿದ್ದಾರೆ. ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿದ ವೇಳೆ ಮಳೆಯಿಂದ ಹನಿಯಾದವರಿಗೆ ಪರಿಹಾರ ಹಾಗೂ ಇತರ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಶಾಸಕರಿಗೆ ಚರ್ಚಿಸಲು ತಡೆಯಾಗಿರುವ ವಿಷಯವಾದರೂ ಏನು ಎಂದು ಪದ್ಮರಾಜ್ ಪ್ರಶ್ನಿಸಿದ್ರು.



