ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ.ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ.
ಅದರ ಬದಲು ಎಲ್‌ಇಡಿ ಪರದೆ ಮೂಲಕ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ. ಪ್ರತಿ ಶನಿವಾರ ಮತ್ತು ಭಾನುವಾರ ಉಡುಪಿಯ ಪಿಪಿಸಿ ಆಡಿಟೋರಿಯಮ್ ನಲ್ಲಿ ಪ್ರದರ್ಶನ ಮಾಡಲಾಗುವುದು. ಶೋ ಮುಗಿದ ಬಳಿಕ ಕೆರಿಯರ್ ಗೈಡೆನ್ಸ್ ನಡೆಯಲಿದ್ದು, ಸಂದರ್ಶನದ ಭಯ ಹಾಗೂ ಪರೀಕ್ಕೆ ಭಯದ ಬಗ್ಗೆ ಇತರ ಪ್ರಶ್ನೆಗಳೇನಾದರೂ ಇದ್ದಲ್ಲಿ ಉತ್ತರಿಸಲಾಗುವುದು. ಇಲ್ಲದಿದ್ದಲ್ಲಿ ಬೇಕಾದ ವಿದ್ಯಾರ್ಥಿಗಳಿಗೆ, ಸಿನೆಮಾದಲ್ಲಿ ಹೇಳಲಾದ ಸ್ಪಡಿ ಟೆಕ್ನಿಕ್ಸ್ಗಳನ್ನು ಸವಿಸ್ತಾರವಾಗಿ ವಿವರಿಸಲಾಗುವುದು ಎಂದ್ರು. ಇದು ‘ಮಕ್ಕಳು ಆತ್ಮಹತ್ಯೆ ಮಾಡುವುದು, ‘ಮನೆ ಬಿಟ್ಟು ಓಡಿ ಹೋಗುವುದು ಇಂತಹ ನಾನಾ ರೀತಿಯ ಸಮಸ್ಯೆಗಳನ್ನು ತಂದೊಡ್ಡುವ ಪರೀಕ್ಷೆ ಹೆದರಿಕೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ತಯಾರಿಸಿರುವ ಶೈಕ್ಷಣಿಕ-ಸಾಮಾಜಿಕ ಚಲನಚಿತ್ರವಾಗಿದೆ. ಮನೆಯಲ್ಲಿಯೇ ಕುಳಿತು ನೋಡಲು ಅನುಕೂಲವಾಗುವಂತೆ ಪ್ರದರ್ಶಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕಲಾವಿದರಾದ ಅಶ್ವಿನಿ ಶೀತಲ್, ಪ್ರದೀಪ್ ಉಪಸ್ಥಿತರಿದ್ರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…