ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೊನೆಗೂ ರಾಕೇಶ್ ಮನೆಗೆ ರಿಷಬ್ ಶೆಟ್ಟಿ ಭೇಟಿ, ಸಾಂತ್ವಾನ

ಕಾಮಿಡಿ ಕಿಲಾಡಿಗಳು ಶೋ ಮೂಲಕ ಮನೆಮಾತಾಗಿದ್ದ ನಟ ರಾಕೇಶ್ ಪೂಜಾರಿ ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ರು.

ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ಕೂಡ ರಾಕೇಶ್ ಪೂಜಾರಿ ಅವರು ನಟಿಸುತ್ತಿದ್ರು. ಆದರೆ ರಾಕೇಶ್ ನಿಧನರಾದಾಗ ಈ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು. ಈಗ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.ರಾಕೇಶ್ ಪೂಜಾರಿ ನಿಧನರಾಗಿ 21 ದಿನಗಳು ಕಳೆದ ಬಳಿಕ ಅವರ ಮನೆಗೆ ರಿಷಬ್ ಶೆಟ್ಟಿ ಬಂದಿದ್ದಾರೆ. ರಾಕೇಶ್ ಪೂಜಾರಿ ಕುಟುಂಬಸ್ಥರಿಗೆ ರಿಷಬ್ ಶೆಟ್ಟಿ ಹಾಗು ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಂತ್ವಾನ ಹೇಳಿದ್ದಾರೆ. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ.

ರಿಷಬ್ ಶೆಟ್ಟಿ ಅವರು ಕಾಂತಾರ: ಚಾಪ್ಟರ್ 1 ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಹಾಗೂ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೂ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್‌ನಲ್ಲಿ ಕೂಡ ಅವರು ಪಾಲ್ಗೊಂಡಿದ್ರು. ಈ ಸಿನಿಮಾ ಮೇಲೆ ಅವರು ಸಖತ್ ಭರವಸೆ ಇಟ್ಟುಕೊಂಡಿದ್ರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನ ಹೊಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!