ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ ಮುಟ್ಟಿಸತೊಡಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಅರುಣ್ ಪುತ್ತಿಲ, ಭರತ್ ಕುಮ್ಡೇಲು ಸೇರಿ 36 ಮಂದಿ ಗಡಿಪಾರಿಗೆ ಸಿದ್ದತೆ ಮಾಡಿದೆ. ಹೊಸ ಎಸ್ಪಿ ಡಾ.ಅರುಣ್ ನೇರ ಕರ‍್ಯಾಚರಣೆಗೆ ಇಳಿದಿದ್ದಾರೆ.
ಕೋಮು ದ್ವೇಷದ ಕೊಲೆ ಸರಣಿ ಮತ್ತು ಈ ರೀತಿಯ ಉದ್ವಿಗ್ನ ವಾತಾವರಣ ಮುಂದೆಂದೂ ಆಗಕೂಡದು ಎಂದು ನರ‍್ಧಾರಮಾಡಿರುವ ಮಾತು ಕಡಿಮೆ ಕೆಲಸ ಹೆಚ್ಚು ಎಂಬ ನಿಲುವಿನ ಎಸ್ಪಿ ಡಾ.ಅರುಣ್ ಮತ್ತು ನನಗೆ ಗೊತ್ತಿರುವುದು ಕಾನೂನು ಮಾತ್ರ ಎಂದಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಜಿಲ್ಲೆಯಲ್ಲಿ ಸರಣಿ ಹತ್ಯೆಗೆ ಪರ‍್ಣ ವಿರಾಮ ಹಾಕಲು ವ್ಯೂಹಾತ್ಮಕ ಕರ‍್ಯಯೋಜನೆ ಜಾರಿಗೆ ತರಲು ಶುರು ಮಾಡಿದ್ದಾರೆ.
ರೌಡಿ ಹಿನ್ನೆಲೆಯಿರುವ ವ್ಯಕ್ತಿಗಳು, ಸೌಜನ್ಯಾ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಪ್ರಬಲ ಹಿಂದುತ್ವ ಹೋರಾಟಗಾರ ಅರುಣ್ ಪುತ್ತಿಲ ಸೇರಿದಂತೆ ಬಂಟ್ವಾಳ, ಪುತ್ತೂರು ವ್ಯಾಪ್ತಿಯ 36 ಮಂದಿಯನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ಕೈಗೊಂಡಿದ್ದಾರೆ. ಹಾಲಿ ಬಿಜೆಪಿ ಮುಖಂಡರೂ, ಕಳೆದ ಬಾರಿ ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡೆದ್ದು ಗೆಲುವಿನ ಸನಿಹ ಬಂದು ಚಿಲ್ಲರೆ ಮತಗಳಿಂದ ಸೋಲು ಕಂಡಿದ್ದ ಅರುಣ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಸೂಚಿಸಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ ಬೆಳ್ಳಾರೆ ವಿಟ್ಲ ಠಾಣೆ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ಹಿಂದು ಮತ್ತು ಮುಸ್ಲಿಂ ಸಂಘಟನೆ ಕರ‍್ಯರ‍್ತರು, ಬಿಜೆಪಿಯಲ್ಲಿ ಗುರುತಿಸಿಕೊಂಡವರ ಪಟ್ಟಿ ರೆಡಿ ಮಾಡಿದ್ದು ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಪಟ್ಟಿಯಲ್ಲಿ ಒಟ್ಟು 36 ಮಂದಿ ಇದ್ದರೆ, ಈ ಪೈಕಿ 13 ಮುಸ್ಲಿಮರಿದ್ದಾರೆ.
ಪಟ್ಟಿಯಲ್ಲಿ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಹೆಸರು ಮಾತ್ರ ಇದೆ. ಉಳಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯ ಭರತ್ ಕುಮ್ಡೇಲು, ಭುವಿತ್ ಶೆಟ್ಟಿ ಸೇರಿ ಹಲವರ ಹೆಸರಿದೆ. ಎಲ್ಲರಿಗೂ ಆರಂಭದಲ್ಲಿ ನೋಟಿಸ್ ನೀಡಲಾಗುತ್ತಿದ್ದು ಅಭಿಪ್ರಾಯ ಪಡೆದು ಸೂಕ್ತ ಸ್ಪಂದನೆ ಸಿಗದಿದ್ದಲ್ಲಿ ಗಡಿಪಾರು ಮಾಡಲಿದ್ದಾರೆ. ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಅಂದರೆ, ಎಸ್ಪಿ ನಿಯಂತ್ರಣಕ್ಕೆ ಬರುವ ಠಾಣೆಗಳ ವ್ಯಾಪ್ತಿಯ 36 ಮಂದಿಯನ್ನು ಗಡೀಪಾರು ಮಾಡಲು ಇಲಾಖೆ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಸೌಜನ್ಯಾ ಹೋರಾಟ ಮಾತ್ರ ಗುರಿ ಇರಿಸಿಕೊಂಡ ಮಹೇಶ್ ಶೆಟ್ಟಿ ತಿಮರೋಡಿ, ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡಲು ಮುಂದಾಗಿದ್ದು ವಿಶೇಷ. ಪೊಲೀಸ್ ಪಡೆಯ ನಗರ ಮುಖ್ಯಸ್ಥರು ಮತ್ತು ಜಿಲ್ಲಾ ಮುಖ್ಯಸ್ಥರು ಕೈಗೊಂಡಿರುವ ಕ್ರಮಗಳು ಹಿಂದೂ ನಾಯಕರ ಆಕ್ರೋಶವನ್ನು ಎದುರಿಸುತ್ತಿವೆ. ಮುಖ್ಯವಾಗಿ ಇತ್ತೀಚೆಗೆ ನಡೆದ ರಹೀಂ ಹತ್ಯೆಯ ಹಿಂದಿನ ನೈಜ ಕಾರಣ ಇನ್ನೂ ಗೊತ್ತಾಗಿಲ್ಲ.ಬರೇ ಊಹಾ ಪೋಹಗಳಷ್ಟೇ ಹರಡಿ ಅಲ್ಪಕಾಲೀನ ವಿಶ್ರಾಂತಿ ಪಡೆದಿವೆ. ಪೊಲೀಸ್ ಇಲಾಖೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಳ್ಳಬೇಕಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…