ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿನ ಮಟ್ಕಾ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ಪ್ರಕರಣದಲ್ಲಿ ಬಂಧಿತನಾದ ಮಟ್ಕಾ ಬುಕ್ಕಿ ನೀಡಿದ ಮಾಹಿತಿಯ ಆಧಾರದಲ್ಲಿ ಉಡುಪಿಯಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿರಿಯಡ್ಕ ಪಂಚನಬೆಟ್ಟುವಿನ ಪ್ರಕಾಶ್ ಮೂಲ್ಯ ಹಾಗೂ ಮಲ್ಪೆಯ ರತ್ನಾಕರ ಅಮೀನ್, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಇಂದಿರಾನಗರದ ನಾಗೇಶ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…