ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಕೆಂಪಕೋಡು ನಿವಾಸಿ 36ರ ಹರೆಯದ ಶರತ್ ಕುಮಾರ್ ಕೆ ಮೃತ ಚಾಲಕನಾಗಿದ್ದಾನೆ. ಶರತ್ ಕುಮಾರ್ ಅವರು ಪ್ರತಿದಿನದಂತೆ ಬೆಳಗ್ಗೆ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರಳುತ್ತಿದ್ರು.

ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾಗಿದ್ದಾರೆ. ಕೂಡಲೇ ಗಮನಿಸಿದ ಸ್ಥಳೀಯರು ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದ್ರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ರು. ಇತ್ತೀಚೆಗೆ ಹೃದಯಾಘಾತಕ್ಕೆ ಅನಾರೋಗ್ಯದ ಕಾರಣಗಳೇ ಬೇಕಾಗಿಲ್ಲ. ವೈದ್ಯಕೀಯ ಲೋಕಕ್ಕೆ ಈ ಹಾರ್ಟ್ ಆ್ಯಟಾಕ್ ಸವಾಲಾಗಿ ಮಾರ್ಪಟ್ಟಿದೆ.



