ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವೀಡಿಯೋ ಹಾಗೂ ಫೋಟೋಗಳನ್ನು ಹಂಚಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಸಿದ್ದಾರೆ. 
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಉಂಟು ಮಾಡುವ ಹಾಗೂ ಪ್ರಚೋದನಕಾರಿ ಪೋಸ್ಟ್ಗಳು ಹರಿದಾಡುತ್ತಿವೆ. ಇದರ ಮೇಲೆ ನಿಗಾ ಇಡಲು ವಿಶೇಷ ತಂಡ ರಚಿಸಲಾಗಿವೆ. ಈಗಾಗಲೇ ಜಿಲ್ಲೆಯಲ್ಲಿ ಮೂರು ದಿನಗಳಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿ, ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.



