ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನ ರೀತಿಯಲ್ಲಿ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಮಿತಿಯನ್ನು ರಚಿಸಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ಸಮಿತಿಯಲ್ಲಿ ಸೈಯದ್ ನಾಸೀರ್ ಹುಸೇನ್, ಎನ್ ಎ ಹ್ಯಾರಿಸ್, ಜಯಪ್ರಕಾಶ್ ಹೆಗ್ಡೆ, ಕಿಮ್ಮಣ್ಣಿ ರತ್ನಾಕರ್ ಮತ್ತು ನಾನು ಈ ಸಮಿತಿಯ ಸದಸ್ಯನಾಗಿರುತ್ತೇನೆ. ಈ ಸಮಿತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುದಾಗಿ ಸ್ಥೂಲವಾಗಿ ಗಮನಿಸುವುದು. ಶಾಂತಿ ಸಾಮರಸ್ಯ, ಆರ್ಥಿಕ ಅಭಿವೃದ್ಧಿ, ಸಮಾಜಿಕ ದೃಷ್ಟಿಕೋನದಿಂದ ಮುಂದಿನ ದಿನಗಳಲ್ಲಿ ಈ ಸಮಿತಿಯು ಕಾರ್ಯಾಚರಣೆ ನಡೆಸಲಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕೃಷ್ಣ ಶೆಟ್ಟಿ, ಪದ್ಮರಾಜ್ ಪೂಜಾರಿ, ಪ್ರಕಾಶ್ ಸಾಲಿಯಾನ್, ಮಹಮದ್ ಅಲಿ, ವಿಶ್ವೇಶ್ವರ ಕುಮಾರ್ ದಾಸ್ ಮುಂತಾದವರು ಉಪಸ್ಥಿತರಿದ್ರು.



