ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಜಿಲ್ಲಾ ಮುಖಂಡರು ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಿದ್ರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಿ ಶಾಂತಿ ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಿನಂತಿಸಲಾಯಿತು.

ಈ ಸಂದರ್ಭ ಮಾತನಾಡಿದ ಎಸ್ಪಿ ,ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಕರವೇ ಬೆಂಬಲ ಬೇಕು.ಎಲ್ಲರೂ ಸೇರಿ ಒಟ್ಟಾಗಿ ಜಿಲ್ಲೆಯನ್ನು ಶಾಂತಿಯಿ0ದ ಇರಿಸೋಣ. ಜಿಲ್ಲೆಯಲ್ಲಿ ಅಶಾಂತಿ ,ಅಕ್ರಮ ಚಟುವಟಿಕೆಗಳು ನಡೆದಾಗ ನಮ್ಮ ಗಮನಕ್ಕೆ ತನ್ನಿ ಎಂದು ಕರವೇ ಮುಖಂಡರಲ್ಲಿ ವಿನಂತಿಸಿಕೊAಡಿಸಿದ್ದಾರೆ.



