ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ: ಸಂಸದ ಕೋಟ ಆರೋಪ

ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್‌ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆ ವ್ಯಕ್ತಪಡಿಸಿದ, ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ನೀಡುವ ಮೂಲಕ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಎಲ್ಲ ಪ್ರಕ್ರಿಯೆ ಗಮನಿಸಿದರೆ ಇದು ಔರಂಗಜೇಬನ ತುಘಲಕ್ ದರ್ಬಾರ್‌ನಂತೆ ಕಾಣುತ್ತಿದೆ. ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಹಿಂದುಗಳಿಗೆ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶ ಇಲ್ಲವಾಗಿದೆ. ಇದನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಉದ್ಯಾವರ, ಗಿರೀಶ್ ಅಂಚನ್, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!