ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್‌ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆ ವ್ಯಕ್ತಪಡಿಸಿದ, ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ನೀಡುವ ಮೂಲಕ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಎಲ್ಲ ಪ್ರಕ್ರಿಯೆ ಗಮನಿಸಿದರೆ ಇದು ಔರಂಗಜೇಬನ ತುಘಲಕ್ ದರ್ಬಾರ್‌ನಂತೆ ಕಾಣುತ್ತಿದೆ. ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಹಿಂದುಗಳಿಗೆ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶ ಇಲ್ಲವಾಗಿದೆ. ಇದನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಉದ್ಯಾವರ, ಗಿರೀಶ್ ಅಂಚನ್, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ರು.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್‌ನಲ್ಲಿರುವ…