ದಕ್ಷಿಣ ಕನ್ನಡ : ನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಸಂಬಂಧಿಸಿ ಮೂವರು ಬಜರಂಗದಳ ಕಾರ್ಯಕರ್ತರಿಗೆ ಮಂಗಳೂರು ನಗರ ಪೊಲೀಸರು ಗಡಿಪಾರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಅಪರಾಧ ಹಿನ್ನೆಲೆ ಉಳ್ಳ ಮೂರು ವ್ಯಕ್ತಿಗಳನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.
ನೋಟಿಸ್‌ಗೆ ಎದ್ರಿದಾರರಿಂದ ಉತ್ತರ ಬಂದ ಬಳಿಕ ಮೂವರನ್ನು ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಮಾಡುವ ಸಾಧ್ಯತೆ ಇದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ
ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಈ ಮೂವರು ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದಾಗಿ ಇವರ ಮೇಲೆ ಆರೋಪವಿತ್ತು . ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳೂ ಗಡೀಪಾರಿಗೆ ವರದಿ ನೀಡಿದ್ದರು. ಹೀಗಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಯೋಚಿಸಿದ್ದು ,ಇದೀಗ ನೋಟಿಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಸಮಾಜದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಇವರುಗಳನ್ನು ಚಟುವಟಿಕೆಗಳ ತಾಣದಿಂದ ಮತ್ತು ಅಪರಾಧ ಸಂಬಂಧದಿಂದ ದೂರ ಇಟ್ಟು ಅಪರಾಧ ಚಟುವಟಕೆಗಳಗೆ ಕಡಿವಾಣ ಹಾಕಲು ಆರೋಪಿತರನ್ನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವುದು ಸೂಕ್ತ ಹಾಗೂ ಅನಿವಾರ್ಯ ಎಂದು ಸ್ಥಳೀಯ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ವರದಿ ಸಲ್ಲಿಸಿದ್ದಾರೆ.
ಇಂತಹ ಅಪರಾಧ ಹಿನ್ನೆಲೆಯುಳ್ಳ ಎದುರುದಾರನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಕ್ಷಣದಲ್ಲಾದರೂ ಅಪರಾಧಗಳನ್ನು ಎಸಗುವುದು, ಅಂಥ ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡಿ ದುಷ್ಪ್ರೇರಣಿ ನೀಡುವುದರಿಂದ ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುವ ಸಾಧ್ಯತೆಯು ಇರುತ್ತದೆ. ಇಂತಹ ಅಪರಾಧ ಹಿನ್ನಲೆ ಇರುವವರನ್ನು ಕಾನೂನು ಮೂಲಕ ಸೂಕ್ತ ರೀತಿಯಲ್ಲಿ ಹದ್ದುಬಸ್ತಿನಲ್ಲಿಡದೇ ಹಾಗೇ ಬಿಟ್ಟಲ್ಲಿ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಯಾವುದೇ ಸಾಕ್ಷಿದಾರರು ಮತ್ತು ದೂರುದಾರರಲ್ಲಿ ತನ್ನ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣಗಳಿಂದ ಬಿಡುಗಡೆಯಾಗಲು ಪ್ರಯತ್ನಿಸಿರುವ ಸಾಧ್ಯತೆಯೂ ಇದೆ ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ, ಮತ್ತು ಈ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಮುಂದೆ ತರುವ ಸಾಧ್ಯತೆ ಇದೆ.
ನಿರಂತರವಾಗಿ ಕ್ರೈಂ ಮಾಡುತ್ತಿರುವ ಅಪರಾಧಿಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಮಾಡಲಾಗುತ್ತಿದೆ. ಈಗಾಗಲೇ 60 ಮಂದಿಯನ್ನು ಗಡಿಪಾರು ಮಾಡಲಾಗಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮೂವರಿಗೆ ನೋಟಿಸ್ ನೀಡಲಾಗಿದ್ದು, ಗಡಿಪಾರು ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…