ಪುತ್ತೂರು ತಾಲೂಕು ಗ್ರಾಮಾಂತರ ಮಂಡಲ ವ್ಯಾಪ್ತಿಯ ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸರಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರುಮಾರು, ಶಾಂತಿಗೋಡು ಶಕ್ತಿ ಕೇಂದ್ರ ಅಧ್ಯಕ್ಷ ವಿಶ್ವನಾಥ್ ಬಲ್ಯಾಯ ಸೇರಿದಂತೆ ಹಲವರು ಉಪಸ್ಥಿತರಿದ್ರು.



