ಬಸ್ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬ0ಧಿಸಿ ಇಬ್ಬರು ಆರೋಪಿಗಳನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

ಇಡೂರು-ಕುಂಜ್ಞಾಡಿ ಗ್ರಾಮದ ಕಾರ್ತಿಕ್ ಆಚಾರಿ ಮತ್ತು ವಿಷ್ಣು ಶೆಟ್ಟಿ ಬಂಧಿತ ಆರೋಪಿಗಳು. ಈ ಇಬ್ಬರು ಜೂ.೨ರಂದು ರಾತ್ರಿ ಕೆಲಸ ಮುಗಿಸಿಕೊಂಡು ಇಡೂರು ಕುಂಜ್ಞಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ಸುಧೀರ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಹೊಡೆದು, ಕುತ್ತಿಗೆಯನ್ನು ಒತ್ತಿ ಹಿಡಿದು ಕೊಲ್ಲಲು ಪ್ರಯತ್ನಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



