ಉಪ್ಪಿನಂಗಡಿಯ ನಟ್ಟಿಬೈಲ್ ನಲ್ಲಿರುವ ಗ್ರಾ.ಪಂ.ನ ಕುಡಿಯುವ ನೀರಿನ ಟ್ಯಾಂಕ್‌ನ ತಳಭಾಗದಲ್ಲಿ ರಟ್ಟಿನ ಬಾಕ್ಸ್, ಕಬ್ಬಿಣದ ರಾಡ್, ಗುಟ್ಕಾ ಪ್ಯಾಕೇಟ್‌ಗಳು ಸೇರಿದಂತೆ ರಾಶಿಗಟ್ಟಲೆ ಕಸವಿರುವುದು ಪತ್ತೆಯಾಗಿದೆ.

ಕಳೆದ ಒಂದು ವರ್ಷದಿಂದ ಇದೇ ಟ್ಯಾಂಕ್‌ನ ನೀರು ಕುಡಿಯುತ್ತಿರುವ ನಟ್ಟಿಬೈಲ್ ಪರಿಸರದ ನಿವಾಸಿಗಳು ಅಧಿಕಾರಿಗಳ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೀವನ್ ಮೆಷಿನ್ ಯೋಜನೆಯಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ನಟ್ಟಿಬೈಲ್‌ನಲ್ಲಿ ಕುಡಿಯುವ ನೀರಿನ ಟ್ಯಾಂಕ್‌ವೊ0ದನ್ನು ನಿರ್ಮಿಸಿತ್ತು.

ಇದರ ಕಾಮಗಾರಿ ಮುಗಿದ ಬಳಿಕ ಅಂದರೆ ಸುಮಾರು ಒಂದು ವರ್ಷಗಳ ಹಿಂದೆ ಇದನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಿತ್ತು. ಈ ಕಾಮಗಾರಿಯ ಸಂದರ್ಭ ರಟ್ಟಿನ ಬಾಕ್‌ಗಳು, ಕಬ್ಬಿಣದ ರಾಡ್‌ಗಳು, ಗುಟ್ಕಾ ಪ್ಯಾಕೇಟ್‌ಗಳು, ಕಾರ್ಡ್ ಬೋರ್ಡ್ಗಳು, ಪ್ಲಾಸ್ಟಿಕ್‌ಗಳು ಸೇರಿದಂತೆ ಇನ್ನಿತರ ಕಸಕಡ್ಡಿ ಗಳು ಟ್ಯಾಂಕ್‌ನೊಳಗಡೆನೇ ಬಾಕಿಯಾಗಿದ್ದು, ಇದನ್ನು ಯಾರೂ ಗಮನಿಸಿರಲಿಲ್ಲ. ಗ್ರಾ.ಪಂ.ನವರು ಇದಕ್ಕೆ ನೀರು ತುಂಬಿಸಿ ನಟ್ಟಿಬೈಲ್ ಪರಿಸರದ ನಿವಾಸಿಗಳ ಮನೆಗಳಿಗೆ ಸರಬರಾಜು ಮಾಡಲು ಆರಂಭಿಸಿತು. ಟ್ಯಾಂಕ್‌ನೊಳಗಿನ ಅಸಲಿಯತ್ತು ತಿಳಿದು ವಾಂತಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಮಸ್ಥರು.



