ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು 223 ಪ್ರಕರಣ ದಾಖಲಿಸಿ, 1,11,500 ರೂ. ದಂಡ ವಿಧಿಸಿದ್ದಾರೆ.
ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರುಗಳಿಗೆ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣ ಹಾಗೂ ಪೊಲೀಸ್ ಠಾಣೆಗಳು ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಜ್, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಕೂಡ ನೀಡಲಾಗಿದೆ. ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…