ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಪ್ರಾದೇಶಿಕ ಕಚೇರಿ ಮತ್ತು ಒರಾಕಲ್ ಇವರು ಇಂದು ಕೆಎಸ್ ಆರ್ಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಸಮಾಜಕಾರ್ಯ ವಿಭಾಗ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಈ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಡಾ ಮದ್ನ ಶಿಲ್ಪ ಅವರು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ತಂಬಾಕುವಿನ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದ್ದಾರೆ. ತಂಬಾಕು ಮತ್ತದರ ವಿವಿಧ ಉತ್ಪನ್ನಗಳು ಮನುಕುಲದ ಆರೋಗ್ಯಕ್ಕೆ ಮಾರಕವಾಗಿದೆ. ಕೆಎಸ್ಆರ್ರ್ಟಿಸಿ ಸಿಬ್ಬಂದಿ ವರ್ಗದವರಿಗೆ ಹಾಗೂ ಡ್ರೈವರ್ ಕಂಡಕ್ಟರ್ಗಳಿಗೆ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಾಯೊಳಗಿನ ಕ್ಯಾನ್ಸರ್ ಬಗ್ಗೆ ತಪಾಸಣೆ ಹಮ್ಮಿಕೊಳ್ಳಲಾಯಿತು.



