ಪ್ಲ್ಯಾಸ್ಟಿಕ್ ಬಳಕೆಯಿಂದ ಜನರ ಆರೋಗ್ಯ ಹಾಗೂ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿವೆ. ಹೀಗಾಗಿ ಮರುಬಳಕೆಗೆ ಯೋಗ್ಯವಾದ ಪ್ಲ್ಯಾಸ್ಟಿಕ್ ಅನ್ನು ಮಾತ್ರ ಬಳಸಬೇಕು. ಏಕಬಳಕೆಯ ಪ್ಲ್ಯಾಸ್ಟಿಕ್ ಅನ್ನು ಬಳಸಬಾರದು. ಪರಿಸರ ಸಂರಕ್ಷಣೆ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ರು. ಪ್ರಾಣಿ ಪಕ್ಷಿ, ಗಿಡ ಮರ, ಜಲ ಮೂಲಗಳನ್ನು ಸಂರಕ್ಷಣೆ ಮಾಡುವುದು ಅಗತ್ಯ. ಇಲ್ಲದಿದ್ದರೆ ಪರಿಸರದ ಅಸಮತೋಲನ ಉಂಟಾಗುತ್ತದೆ. ಪರಿಸರದ ಅಸಮತೋಲನ ಉಂಟಾದರೆ ಮನುಷ್ಯರು ಬದುಕಲು ಸಾಧ್ಯವಿಲ್ಲ. ಪರಿಸರದ ಬಗ್ಗೆ ನಿರ್ಲಕ್ಷ್ಯ ವಹಿಸಿ ಅದರ ಮೇಲೆ ನಿರಂತರ ದಾಳಿ ಮಾಡಿದ ಪರಿಣಾಮ ಭೂಕುಸಿತದಂತಹ ದುರಂತಗಳು ನಡೆಯುತ್ತಿವೆ ಎಂದರು.ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…