ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಪಾಣೆಮಂಗಳೂರು: ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ..!

ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕರಾಗಿದ್ದಾರೆ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ರಮೇಶ್ ರೈ ಅವರು ಇತ್ತೀಚೆಗೆ ನಡೆದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಅವರು ಸಜ್ಜನ ರಾಜಕಾರಣಿ ಎಂದೇ ಚಿರಪರಿಚಿತರಾಗಿದ್ದರು. ಅವರ ಮಿತ್ರರು ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದಾರೆ. ಆರೋಗ್ಯ ಸಮಸ್ಯೆ ಅಥವಾ ಹಣಕಾಸಿನ ಸಮಸ್ಯೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆAದು ಹೇಳಲಾಗುತ್ತಿದೆ. ಪಾಣೆಮಂಗಳೂರು ಸೇತುವೆ ಬಳಿ ದೊರೆತ ಮೊಬೈಲ್ ಸಂಖ್ಯೆಯನ್ನು ಪಡೆದು ಪೊಲೀಸರು ಕರೆ ಮಾಡಿದಾಗ, ಅದು ಪುತ್ತೂರಿನ ರಮೇಶ್ ರೈ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು. ಕೂಡಲೇ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಇದೀಗ ಕುಟುಂಬ ಸದಸ್ಯರು ಮೃತದೇಹವನ್ನು ಗುರುತಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮೃತರು ಪತ್ನಿ ಮೋಹಿನಿ, ಪುತ್ರ ವಿನೀಶ್, ಪುತ್ರಿ ವೀಕ್ಷಾ ಹಾಗೂ ಅಪಾರ ಕುಟುಂಬ ವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!