ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಈ ದುರಂತವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಘಟನೆಯು ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ. ಈಗ ದುರಂತ ನಡೆದ ಬಗ್ಗೆ ಚರ್ಚೆ ಮಾಡುವ ಸಮಯವಲ್ಲ. ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವನ ಹೇಳುವುದು ಮುಖ್ಯ. ಈ ವಿಚಾರದಲ್ಲಿ ಯಾರೇ ರಾಜಕಾರಣ ಮಾಡಿದರೂ ತಪ್ಪು. ರಾಜ್ಯದ ಜನರಿಗೆ, ಅದರಲ್ಲೂ ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವಾನ ಹೇಳುವ ಕೆಲಸ ಆಗಬೇಕು. ಈ ವಿಷಯದಲ್ಲಿ ಯಾರೂ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದಿದ್ದಾರೆ.



