ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಪ್ರಗತಿಯನ್ನು ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈಗಾಗಲೆ ಧಾರ್ಮಿಕ ಮುಖಂಡರು, ವ್ಯಾಪಾರಿಗಳು, ನ್ಯಾಯವಾದಿಗಳು, ಬರಹಗಾರರು, ಸಾಮಾನ್ಯರು ಮುಂತಾದವರ ನಿಲುವನ್ನು ಪಡೆದುಕೊಳ್ಳಲು ಪ್ರಾರಂಭಿಸಿದೆ ಎಂದು ರಾಜ್ಯಸಭಾ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಡಾ.ನಾಸೀರ್ ಹುಸೈನ್ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು. 
ದಕ್ಷಿಣ ಕನ್ನಡ ಭಾಗದಲ್ಲಿ ಶಾಂತಿ ಸೌಹಾರ್ದತೆಯ ಶಾಶ್ವತ ಉಳಿವಿಗಾಗಿ ಕೆಲಸ ಮಾಡುವುದು ನಮ್ಮ ಉದ್ದೇಶವಾಗಿದೆ. ಒಂದು ಕಾಲದಲ್ಲಿ ಧಾರ್ಮಿಕ, ಸಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಇದೆ. ಜನರ ಅಭಿಪ್ರಾಯವನ್ನು ಕ್ರೋಡೀಕರಿಸಿ ರಾಜಕೀಯ ಮುಖಂಡರ ಜೊತೆ ಚರ್ಚೆ ನಡೆಸಿ ವರದಿಯನ್ನು ಮುಂದಿನ ವಾರದಲ್ಲಿ ಜಾರಿ ಮಾಡಲಾಗುವುದು ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಯನ ಸಮಿತಿ ಕಿಮ್ಮಣಿ ರತ್ನಾಕರ್, ಜಯಪ್ರಕಾಶ್ ಹೆಗ್ಡೆ, ಸುದರ್ಶನ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ, ಪದ್ಮರಾಜ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ರು.



