ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ನಾಯಕ್ ಪೈ ಅಸೋಸಿಯೇಟ್ ಮಾಲಕರಾದ ಸುರೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕಳೆದ 9 ವರ್ಷಗಳಲ್ಲಿ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಪ್ರಬಲ ನಾಯಕತ್ವದ ಕಾರಣ ಭಾರತ ಇಂದು ಜಗತ್ತಿಗೆ ಮಾರ್ಗದರ್ಶನ ಮಾಡುವಂತಾಗಿದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಕೂಡ ಭಾರತ ಸಂಧಾನದ ನೇತೃತ್ವ ವಹಿಸಬೇಕೆಂದು ವಿಶ್ವದ ಅನೇಕ ದೇಶಗಳು ಆಗ್ರಹಿಸಿದ್ದವು. ಇವೆಲ್ಲದಕ್ಕೂ ಕಾರಣ ದೇಶದ ಜನತೆಯ ಬೆಂಬಲ. ಮತ್ತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ನರೇಂದ್ರ ಮೋದಿ ಜೀ ಅವರನ್ನು ಬೆಂಬಲಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ ಬಂಗೇರ, ರಮೇಶ್ ಹೆಗ್ಡೆ, ಗುರುಚರಣ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್ಯ, ರಾಮ್ ಪೈ, ನಿಲೇಶ್ ಕಾಮತ್, ಪವನ್ ಶೆಣೈ, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.




