ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಬ್ರಹ್ಮಾವರ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ದಿನೇಶ್ ಪೂಜಾರಿ ಅವರು ಮನೆಗೆ ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂ ಇಂಜಿನಿಯರ್ ಬಳಿ ಹೋಗಿದ್ದರು. ಅದರಂತೆ ಸ್ಥಳ ಪರಿಶೀಲನೆ ನಡೆಸಿದ್ದ ಇಂಜಿನಿಯರ್ ಬಳಿಕ 20 ಸಾವಿರ ರೂ.ಗೆ ಬೇಡಿಕೆ ಇರಿಸಿದ್ದರು. ಈ ಕುರಿತು ದಿನೇಶ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ಇಂದು ಬೆಳಿಗ್ಗೆ ಲಂಚದ ಹಣ ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಮಂಜುನಾಥ ನೇತೃತ್ವದ ತಂಡವು ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿಯನ್ನು ಬಂಧಿಸಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…