ಕಾನೂನು ಗೌರವಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ‍್ಯ ಪರಿಪಾಲನೆಯಾಗಬೇಕು ಹೊರತು ಸ್ವಾತಂತ್ರ‍್ಯವನ್ನು ಮೀರಿದ ವರ್ತನೆ ಸರಿಯಲ್ಲ. ಯಾರೂ ಕಾನೂನು ಮೀರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಹೇಳಿದ್ದಾರೆ. ಇವರು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರಿನ ಪುರಭವನದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ರು.
ಡ್ರಗ್ಸ್ ಸೇವನೆ ಮತ್ತು ಸಾಮಾಜಿಕ ಜಾಲತಾಣದ ಕಾರಣದಿಂದಾಗಿ ತೊಂದರೆಯಾಗುತ್ತಿದೆ. ಇದನ್ನು ತಡೆಯುವುದು ಕೇವಲ ಪೊಲೀಸರ ಮಾತ್ರ ಜವಾಬ್ದಾರಿಯಲ್ಲ. ಹೆತ್ತವರಿಗೆ ಮತ್ತು ಸಾರ್ವಜನಿಕರಿಗೂ ಈ ಬಗ್ಗೆ ಜವಾಬ್ದಾರಿಯಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಮುಂದುವರಿದಲ್ಲಿ ಸಮಾಜದಲ್ಲಿ ಯಾವುದೇ ಅಶಾಂತಿ ಹರಡಲು ಸಾಧ್ಯವಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಸಾರ್ವಜನಿಕರದ್ದು ಇದೆ. ಸಾಮಾಜಿಕ ಜಾಲತಾಣ ಸಹಿತ ವಿವಿಧ ಮಾಧ್ಯಮಗಳ ಬಳಕೆಯ ಸಂದರ್ಭದಲ್ಲಿಯು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…