ಬೆಂಗಳೂರು-ಮ0ಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿ0ದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆ ಬದಿಗೆ ಉರುಳಿದ್ದು, 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆಯ ವೇಳೆಗೆ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಹೆಚ್ಚಿನವರು ಹಬ್ಬದ ಪ್ರಯುಕ್ತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಪ್ರಯಾಣಿಕರು ನಿದ್ದೆಯ ಮುಂಪರೆಯಲ್ಲಿರುವ ಸಂದರ್ಭದಲ್ಲಿ ಗುಂಡ್ಯ ಸಮೀಪದ ಬರ್ಚಿನಹಳ್ಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಯಾವುದೇ ರೀತಿಯ ಯಾವುದೇ ಜೀವಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ಫಹದ್ (20) ಮೂಡಬಿದ್ರೆ, ರಂಝೀನ್(25) ಪರಂಗಿಪೇಟೆ, ಉಮ್ಮರ್ (53)ದೇರಳಕಟ್ಟೆ, ತಮೀನ್(19) ಪುತ್ತೂರು, ಇಷಾಮ್(19) ಸಾಲ್ಮರ ಪುತ್ತೂರು, ರುಕ್ಮಯ(24) ಉಪ್ಪಿನಂಗಡಿ, ಜಾಹಿರ್ (23) ಸಾಲೆತ್ತೂರು ಬಂಟ್ವಾಳ, ಶಮೀರ್ (28) ವಿಟ್ಲ, ಆನ್ಸರ್ (26) ವಿಟ್ಲ, ಸೋಮಶೇಖರ (55) ದಾಸರಪುರ ಬೆಂಗಳೂರು, ಶರತ್(35) ದಾಸರಪುರ ಬೆಂಗಳೂರು, ಡಾ. ಮಹಂತ್ ಗೌಡ (47) ನೆಲಮಂಗಲ ಬೆಂಗಳೂರು, ಸಿಮಾಕ್ (23), ಅಬ್ದುಲ್ ರಜೀದ್ (38) ಸಂಪ್ಯ ಪುತ್ತೂರು, ಪೌಝಿಲ್ (23), ಕೈಕಂಬ ಮೂಡುಬಿದ್ರೆ, ಅಲ್ತಾಫ್(28) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಪ್ರಥಮ ಚಿಕಿತ್ಸೆಯನ್ನು ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ 12 ಮಂದಿಯನ್ನು ಮಂಗಳೂರು ಐಲ್ಯಾಂಡ್ ಆಸ್ಪತ್ರೆಗೆ, ಓರ್ವನನ್ನು ಮಂಗಳೂರು ಕೆಎಂಸಿ ಆಸ್ಪತ್ರೆಗೆ ಹಾಗೂ ಓರ್ವನನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳದಿಂದ ಸುಮಾರು 8 ಆಂಬುಲೆನ್ಸ್ಗಳಲ್ಲಿ ಗಾಯಾಳುಗಳನ್ನು ಸ್ಥಳಾಂತರಿಸಲಾಯಿತು.
ಇವರಲ್ಲಿ ಮೂವರು ತೀವ್ರ ಗಾಯ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…