ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.
ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಮೃತಪಟ್ಟ ವಿದ್ಯಾರ್ಥಿ. ಕಾರಿಂಜೇಶ್ವರ ದೇವಾಲಯದ ಕೆಳಗೆ ಇರುವ ಕೆರೆಯಲ್ಲಿ ಕಾಲು ತೊಳೆಯಲು ಇಳಿದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ, ಇಂದು ಅದೇ ರೀತಿ ಸ್ನೇಹಿತ ಪ್ರಶ್ವಿತ್‌ನ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಕಾಲು ಜಾರಿ ಕೆರೆಯೊಳಗೆ ಚೇತನ್ ಬಿದ್ದಿದ್ದಾನೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಎಂಬಿಬ್ಬರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ, ಆದರೆ ಅದಾಗಲೇ ಚೇತನ್ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…