ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್ ಹಬ್ಬ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ಹಾಗೂ ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತುಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಸಾಮಾಜಿಕ ಜಾಲದಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ ಗಳನ್ನು ಹಾಕಬಾರದು ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ. ಡ್ರಗ್ಸ್ ಸೇವನೆಯಿಂದ ಹಲವಾರು ಯುವಕರು ತಮ್ಮ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಹೆತ್ತವರು ತಮ್ಮ ಮಕ್ಕಳನ್ನು ಇಂತಹ ವಿಷ ಪದಾರ್ಥದಿಂದ ದೂರ ಇರಲು ಮಕ್ಕಳನ್ನು ಸಲಹೆ ನೀಡಬೇಕೆಂದು ಅವರು ಮನವಿ ಮಾಡಿದರು. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!