ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ಹಾಗೂ ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತುಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಸಾಮಾಜಿಕ ಜಾಲದಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ ಗಳನ್ನು ಹಾಕಬಾರದು ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ. ಡ್ರಗ್ಸ್ ಸೇವನೆಯಿಂದ ಹಲವಾರು ಯುವಕರು ತಮ್ಮ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಹೆತ್ತವರು ತಮ್ಮ ಮಕ್ಕಳನ್ನು ಇಂತಹ ವಿಷ ಪದಾರ್ಥದಿಂದ ದೂರ ಇರಲು ಮಕ್ಕಳನ್ನು ಸಲಹೆ ನೀಡಬೇಕೆಂದು ಅವರು ಮನವಿ ಮಾಡಿದರು. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…