ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇವರಿಗೆ ಕಲ್ಲೂರು ಎಜುಕೇಷನ್ ಟ್ರಸ್ಟ್ , ಯು.ಆರ್. ಫೌಂಡೇಶನ್ ಸಾಥ್ ನೀಡಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲ್ಲೂರು ಎಜುಕೇಷನ್ ಟ್ರಸ್ಟ್ನ ವಿಠಲ್ ನಾಯಕ್ ಮಾತನಾಡಿ, ಕಳೆದ ವರ್ಷ ಶಿರೂರಿನಲ್ಲಿ ಗುಡ್ಡ ಕುಸಿತದ ಸಂದರ್ಭ ಇಲ್ಲಿಗೆ ಆಗಮಿಸಿದ್ದ ಪತ್ರಕರ್ತರು ತಮ್ಮ ಕರ್ತವ್ಯದ ಜೊತೆಗೆ ಮನೆ ಮಠ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ಸಮಾಗ್ರಿಗಳನ್ನು ವಿತರಿಸಿದ್ರು. ಈಗ ಇಲ್ಲಿನ ಶಾಲಾ ಮಕ್ಕಳಿಗೂ ಪುಸ್ತಕ, ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ಎಂದ್ರು. ಇದೇ ವೇಳೆ ಪತ್ರಕರ್ತ ಶಶಿ ಬೆಳ್ಳಾಯರು ಮಾತನಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಆರಿಫ್ ಯು.ಆರ್.ಕಲ್ಕಟ್ಟ , ಕಲ್ಲೂರು ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಶ್ರೇಯಸ್ ನಾಯಕ್, ಪತ್ರಕರ್ತರಾದ ಮೋಹನ್ ಕುತ್ತಾರ್, ಶಿವು ಕಿದೂರು, ಎಚ್.ಟಿ. ಶಿವಕುಮಾರ್, ಗಿರೀಶ್ ಮಳಲಿ ಸೇರಿದಂತೆ ಅನೇಕರು ಭಾಗಿಯಾಗಿದ್ರು.
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…