ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹಸಚಿವ ಡಾ. ಜಿ.ಪರಮೇಶ್ವರರು ರಾಜೀನಾಮೆ ನೀಡಬೇಕು. ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಾಧೀಶರ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನಗರದಲ್ಲಿ ದ.ಕ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ಕಾಂಗ್ರೆಸ್ ಸರಕಾರಕ್ಕೆ ಶಾಂತಿ ಸುವ್ಯವಸ್ಥೆ ಕಾಪಾಡುವ, ಆಡಳಿತ ನಡೆಸುವ ಸಾಮರ್ಥ್ಯವಿಲ್ಲ. ಆಡಳಿತ ವೈಫಲ್ಯಕ್ಕೆ ಕಾಲ್ತುಳಿತ ಘಟನೆಯೂ ಉದಾಹರಣೆಯಾಗಿದೆ. ಸಿಎಂ, ಡಿಸಿಎಂ, ಸಚಿವರ ಮನೆಯವರಿಗೆ ಮೋಜು ಮಸ್ತಿ, ಸೆಲ್ಪಿಗಾಗಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಆಪಾದಿಸಿದ್ದಾರೆ. ಇನ್ನು ಈ ಪ್ರತಿಭಟನೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆಳ್ವ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಸೇರಿದಂತೆ ಹಲವರು ಭಾಗಿಯಾಗಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…