ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.
ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್‌ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್‌ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…