ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ, ಬಿಜೆಪಿ ಪ್ರತಿಭಟನೆ

ಕಾಲ್ತುಳಿತ ಘಟನೆಗೆ ಸಂಬ0ಧಿಸಿ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆದಿದೆ.

ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಆರ್.ಸಿ.ಬಿ ವಿಜಯೋತ್ಸವವನ್ನು ಯಾವುದೇ ಪೂರ್ವಸಿದ್ಧತೆ ಇಲ್ಲದೆ ಆಯೋಜಿಸಿ, ಪ್ರಚಾರ ಗಿಟ್ಟಿಸಿಕೊಳ್ಳುವ ಕಾಂಗ್ರೆಸ್ ತೆವಲಿನಿಂದಾಗಿ ಕಾಲ್ತುಳಿತ ಉಂಟಾಗಿ 11 ಮಂದಿ ಪ್ರಾಣ ಕಳೆದುಕೊಳ್ಳಬೇಕಾಯಿತು. ಈ ಪ್ರಕರಣಕ್ಕೆ ಪೊಲೀಸರ ತಲೆದಂಡ ಪಡೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಸರ್ಕಾರ ತನ್ನ ವೈಫಲ್ಯವನ್ನು ಮರೆಮಾಚಲು ಪೊಲೀಸರ ತಲೆದಂಡ ಪಡೆದಿದೆ ಎಂದು ಆರೋಪಿಸಿದ್ದಾರೆ. ಇನ್ನು ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಲಾಲಾಜಿ ಮೆಂಡನ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!